ಮೊಸರಿನಲ್ಲಿದೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗುಣ

ಮೊಸರನ್ನು ನಿತ್ಯ ಸೇವಿಸಬೇಕು ಎಂದು ಎಲ್ಲರೂ ಹೇಳಿರುವುದನ್ನು ನೀವು ಕೇಳಿರಬಹುದು. ಮದುವೆ ಮೊದಲಾದ ಸಮಾರಂಭಗಳಲ್ಲಿ ಊಟದ ಕೊನೆಗೆ ಮಜ್ಜಿಗೆ ಅಥವಾ ಮೊಸರಿನಲ್ಲಿ ಊಟ ಮಾಡುವ ಆಯ್ಕೆ ಕಡ್ಡಾಯವಾಗಿ ಇದ್ದೇ ಇರುತ್ತದೆ. ಇದಕ್ಕೆ ಕಾರಣವೂ ಇದೆ.

ಮೊಸರನ್ನು ಬೆಳಿಗ್ಗೆ ಮತ್ತು ಮಧ್ಯಾಹ್ನದ ಊಟದಲ್ಲಿ ಮಾತ್ರ ಸೇವಿಸಬೇಕು. ರಾತ್ರಿ ಮೊಸರನ್ನು ಹೆಚ್ಚು ಬಳಸುವುದರಿಂದ ಕಫದ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ತಂಪಾಗಿರುವ ಮೊಸರಿನ ಬಳಕೆಯೂ ಅಷ್ಟು ಒಳ್ಳೆಯದಲ್ಲ. ಹೆಚ್ಚು ಹುಳಿ ಬರುವುದು ಬೇಡ ಎಂಬ ಕಾರಣಕ್ಕೆ ಮೊಸರನ್ನು ಫ್ರಿಜ್ ನಲ್ಲಿ ಇಟ್ಟರೂ ಊಟಕ್ಕೆ ಕನಿಷ್ಠ ಒಂದು ಗಂಟೆ ಮೊದಲೇ ಹೊರಗೆ ತೆಗೆದಿಡಬೇಕು.

ಮೊಸರು ಜೀರ್ಣ ಕ್ರಿಯೆಯನ್ನು ಚುರುಕುಗೊಳಿಸುತ್ತದೆ. ದೇಹಕ್ಕೆ ಬೇಕಿರುವ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರಕ್ತದ ಕೊಲೆಸ್ಟ್ರಾಲ್ ತಗ್ಗಿಸಿ ಹೃದಯ ಮತ್ತು ರಕ್ತನಾಳ ವ್ಯವಸ್ಥೆಯನ್ನು ದೃಢವಾಗಿಸುತ್ತದೆ.

ನಿತ್ಯ ಮೊಸರು ಸೇವನೆ ಮಾಡುವುದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದು. ಬೆಳೆಯುತ್ತಿರುವ ಮಕ್ಕಳಿರುವ ಮನೆಯಲ್ಲಿ ನಿತ್ಯ ಮೊಸರು ಬಳಕೆ ಕಡ್ಡಾಯ ಮಾಡಬೇಕು. ಇದರಿಂದ ಮಕ್ಕಳಲ್ಲೂ ರೋಗ ನಿರೋಧಕ ಶಕ್ತಿ ಬೆಳೆಯುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read