HomeKarnatakaಮೋದಿ - ಶಾ ಸೇರಿಕೊಂಡು ಕರ್ನಾಟಕದ ಆಸ್ತಿಗಳನ್ನು ಗುಜರಾತಿನ ಮಾರ್ವಾಡಿಗಳಿಗೆ ಕೊಡುತ್ತಿದ್ದಾರೆ; ಎಚ್. ವಿಶ್ವನಾಥ್ ವಾಗ್ದಾಳಿ

ಮೋದಿ – ಶಾ ಸೇರಿಕೊಂಡು ಕರ್ನಾಟಕದ ಆಸ್ತಿಗಳನ್ನು ಗುಜರಾತಿನ ಮಾರ್ವಾಡಿಗಳಿಗೆ ಕೊಡುತ್ತಿದ್ದಾರೆ; ಎಚ್. ವಿಶ್ವನಾಥ್ ವಾಗ್ದಾಳಿ

ಬಿಜೆಪಿಯಿಂದ ಈಗಾಗಲೇ ಒಂದು ಕಾಲು ಹೊರಗಿಟ್ಟಿರುವ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದು, ಭದ್ರಾವತಿಯಲ್ಲಿರುವ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚಲು ಹೊರಟಿರುವುದಕ್ಕೆ ಕಿಡಿ ಕಾರಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ – ಅಮಿತ್ ಶಾ ಸೇರಿಕೊಂಡು ಕರ್ನಾಟಕದ ಒಂದೊಂದೆ ಆಸ್ತಿಗಳನ್ನು ಗುಜರಾತಿನ ಮಾರ್ವಾಡಿಗಳಿಗೆ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ತಾವು ಕಾಂಗ್ರೆಸ್ ಸೇರುವ ಕುರಿತಂತೆ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್, ನನ್ನ ಕಣಕಣದಲ್ಲೂ ಕಾಂಗ್ರೆಸ್ ಇದೆ. ನಾನು ಹಿಡಿಯುವ ಧ್ವಜ ಬದಲಾಗಿರಬಹುದು, ಆದರೆ ನನ್ನ ತತ್ವ ಅದೇ ರೀತಿ ಮುಂದುವರಿದಿದೆ ಎಂದು ಹೇಳುವ ಮೂಲಕ ಶೀಘ್ರದಲ್ಲೇ ಬಿಜೆಪಿ ತೊರೆಯುವ ಇಂಗಿತ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular