HomeKarnatakaಯಡಿಯೂರಪ್ಪನವರನ್ನು ಹೆದರಿಸಿರುವ ಬಿಜೆಪಿ ವರಿಷ್ಠರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ; SSM ಆರೋಪ

ಯಡಿಯೂರಪ್ಪನವರನ್ನು ಹೆದರಿಸಿರುವ ಬಿಜೆಪಿ ವರಿಷ್ಠರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ; SSM ಆರೋಪ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಅವರುಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸುತ್ತಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ದಾವಣಗೆರೆ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್, ಯಡಿಯೂರಪ್ಪನವರನ್ನು ಹೆದರಿಸಿರುವ ಬಿಜೆಪಿ ವರಿಷ್ಠರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವಂತೆ ಮಾಡಿದ್ದಾರೆ. ಹೀಗಾಗಿ ಅವರು ಬೊಂಬೆಯಂತೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸೋಮವಾರದಂದು ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಲಿಂಗಾಯತ ನಾಯಕರಿಗೆ ನಿರೀಕ್ಷಿತ ಗೌರವ ಸಿಗುತ್ತಿಲ್ಲ. ಹೀಗಾಗಿಯೇ ಅವರುಗಳು ಬಿಜೆಪಿಯಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಶೆಟ್ಟರ್, ಲಕ್ಷ್ಮಣ ಸವದಿ ಆಗಮನದಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ಬಲ ಹೆಚ್ಚಿಸಿಕೊಳ್ಳಲಿದೆ ಎಂದು ಅಭಿಪ್ರಾಯಪಟ್ಟರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular