ಯತ್ನಾಳ್ ವಿರುದ್ಧ ಮತ್ತೆ ಕಿಡಿಕಾರಿದ ಮುರುಗೇಶ್ ನಿರಾಣಿ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಪರಾವಗೊಂಡರೂ ಸಹ ನಾಯಕರುಗಳ ನಡುವಿನ ಮಾತಿನ ಸಮರ ನಿಂತಿಲ್ಲ. ಈ ಸೋಲಿಗೆ ಪರಸ್ಪರರತ್ತ ಬೊಟ್ಟು ಮಾಡಿ ತೋರಿಸಲಾಗುತ್ತಿದ್ದು, ಈ ಒಳ ಜಗಳಕ್ಕೆ ಕಡಿವಾಣ ಹಾಕಲು ಬಿಜೆಪಿ ಹೈಕಮಾಂಡ್ ಸಹ ಮುಂದಾಗುತ್ತಿಲ್ಲ.

ಇತ್ತೀಚೆಗೆ ನಡೆದ ಸೋಲಿನ ಪರಾಮರ್ಶೆ ಸಭೆಯಲ್ಲಿ ವೇದಿಕೆಯಲ್ಲಿಯೇ ನಾಯಕರುಗಳು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಅದರಲ್ಲೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಟಾಂಗ್ ನೀಡಿದ್ದರು.

ಇದೀಗ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಿಡಿ ಕಾರಿದ್ದಾರೆ. ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲಲು ಯತ್ನಾಳ್ ಅವರೇ ನೇರ ಕಾರಣ ಎಂದು ಆರೋಪಿಸಿದ್ದಾರೆ.

ಬಿಜೆಪಿ ಅಧಿಕಾರದಲ್ಲಿದ್ದಲ್ಲಿದ್ದ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹಲವು ಹೇಳಿಕೆಗಳು ಚುನಾವಣೆಯಲ್ಲಿ ದೊಡ್ಡ ಹೊಡೆತ ನೀಡಿದವು ಎಂದು ಹೇಳಿದ ಮುರುಗೇಶ್ ನಿರಾಣಿ, ಅಭ್ಯರ್ಥಿಗಳನ್ನು ಗೆಲ್ಲಿಸಲಾಗದ ಯತ್ನಾಳ್ ಅವರಿಗೆ ಚುನಾವಣಾ ಪ್ರಚಾರಕ್ಕಾಗಿ ಪಕ್ಷ ಹೆಲಿಕಾಪ್ಟರ್ ಕೊಡಿಸಿದ್ದು ವೇಸ್ಟ್ ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read