HomeKarnataka'ಯಶಸ್ವಿನಿ' ಯೋಜನೆ ಕುರಿತು ಇಲ್ಲಿದೆ ಒಂದು ಮಹತ್ವದ ಮಾಹಿತಿ

‘ಯಶಸ್ವಿನಿ’ ಯೋಜನೆ ಕುರಿತು ಇಲ್ಲಿದೆ ಒಂದು ಮಹತ್ವದ ಮಾಹಿತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸಿದ್ದು, ರೈತರು – ಸಹಕಾರಿಗಳಿಗೆ ಉಪಯುಕ್ತವಾಗಿರುವ ಈ ಆರೋಗ್ಯ ಯೋಜನೆಗೆ ನೋಂದಣಿ ಕಾರ್ಯ ನಡೆಯುತ್ತಿದೆ.

ಈ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಈ ಹಿಂದೆ ಅವಧಿ ಪೂರ್ಣಗೊಂಡಿತ್ತಾದರೂ ಬಳಿಕ ಇದನ್ನು ಮುಂದೂಡುವಂತೆ ಕೋರಿಕೆ ಬಂದ ಹಿನ್ನೆಲೆಯಲ್ಲಿ ಅದನ್ನು ಪರಿಗಣಿಸಿ ಫೆಬ್ರವರಿ 28 ರ ವರೆಗೆ ರೈತರು, ಸಹಕಾರಿಗಳು ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನಾಲ್ಕು ಜನರ ಕುಟುಂಬಕ್ಕೆ ಗ್ರಾಮೀಣ ಪ್ರದೇಶದಲ್ಲಿ 500 ರೂಪಾಯಿ, ನಗರ ಪ್ರದೇಶದಲ್ಲಿ 1000 ರೂಪಾಯಿ ನಿಗದಿಪಡಿಸಲಾಗಿದ್ದು, ಕುಟುಂಬ ಸದಸ್ಯರ ಸಂಖ್ಯೆ ಹೆಚ್ಚಾಗಿದ್ದಲ್ಲಿ ತಲಾ ಒಬ್ಬರಿಗೆ 200 ರೂಪಾಯಿ ಹೆಚ್ಚುವರಿಯಾಗಿ ಪಾವತಿಸಬೇಕಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೋಂದಣಿ ಮಾಡಿಸಿಕೊಂಡವರಿಗೆ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗೆ ನಗದುರಹಿತ ಚಿಕಿತ್ಸೆ ಪಡೆಯಬಹುದಾಗಿದ್ದು, ಇನ್ನೂ ನೋಂದಣಿ ಮಾಡಿಸಿಕೊಳ್ಳದವರು ಫೆಬ್ರವರಿ 28 ರೊಳಗೆ ನೋಂದಣಿ ಮಾಡಿಸಿಕೊಳ್ಳಲು ಕೋರಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular