HomeKarnatakaರಕ್ತದಲ್ಲಿ ಡಿ.ಕೆ. ಶಿವಕುಮಾರ್ ಚಿತ್ರ ಬರೆದು ಉಡುಗೊರೆ ನೀಡಿದ ಅಭಿಮಾನಿ

ರಕ್ತದಲ್ಲಿ ಡಿ.ಕೆ. ಶಿವಕುಮಾರ್ ಚಿತ್ರ ಬರೆದು ಉಡುಗೊರೆ ನೀಡಿದ ಅಭಿಮಾನಿ

ಬೆಂಗಳೂರು: ಸರ್ಕಾರ ರಚನೆ, ಸಿಎಂ ಕುರ್ಚಿಗಾಗಿ ಪೈಪೋಟಿ ನಡೆಸಿರುವ ಹೊತ್ತಲ್ಲೇ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ರಕ್ತದಲ್ಲಿ ಡಿ.ಕೆ.ಶಿವಕುಮಾರ್ ಚಿತ್ರ ಬಿಡಿಸಿ ಕೊಟ್ಟಿದ್ದಾರೆ.

ಬಿಂದು ಗೌಡ ಎಂಬ ಅಭಿಮಾನಿ ತಮ್ಮ ರಕ್ತದಲ್ಲಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರವನ್ನು ಬಿಡಿಸಿ, ಅದಕ್ಕೆ ಪ್ರೇಮ್ ಹಾಕಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಉಡುಗೊರೆ ನೀಡುವ ಮೂಲಕ ಅಭಿಮಾನ ಮೆರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು, ಅಭಿಮನಿಗಳ ದಂಡೇ ಹರಿದು ಬರುತ್ತಿದ್ದು, ಬೃಹತ್ ಕೇಕ್, ಹೂವಿನ ಹಾರಗಳೊಂದಿಗೆ ಆಗಮಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular