ರಜೆ ಮೇಲೆ ಊರಿಗೆ ಬಂದಿದ್ದ ಯೋಧ; ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದು ದುರ್ಮರಣ

ಧಾರವಾಡ: ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಗರಗ-ಲೋಕೂರ ಕ್ರಾಸ್ ಬಳಿ ನಡೆದಿದೆ.

27 ವರ್ಷದ ನಾಗಪ್ಪ ಉದುಮೇಶಿ ಮೃತ ಯೋಧ. ಧಾರವಾಡದ ಹಾರೋಬೆಳವಡಿ ಗ್ರಾಮದ ನಿವಾಸಿಯಾಗಿದ್ದ ನಾಗಪ್ಪ ಉದುಮೇಶಿ ಕಳೆದ 8 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ರಜೆಯ ಮೇಲೆ ಊರಿಗೆ ಬಂದಿದ್ದ ನಾಗಪ್ಪ ಉದುಮೇಶಿ, ಸ್ನೇಹಿತರೊಂದಿಗೆ ಗರಗದ ಶ್ರೀ ಮಡಿವಾಳೇಶ್ವರ ಜಾತ್ರೆಗೆ ಹೋಗಿ ವಾಪಸ್ ಆಗುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read