HomeLatest Newsಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟಿ ರಮ್ಯಾ: ಮೋಹಕ ತಾರೆ ಹೇಳಿದ್ದೇನು?

ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ನಟಿ ರಮ್ಯಾ: ಮೋಹಕ ತಾರೆ ಹೇಳಿದ್ದೇನು?

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಮೋಹಕ ತಾರೆ, ಮಾಅಜಿ ಸಂಸದೆ ರಮ್ಯಾ ಆಗಮಿಸಿದ್ದು, ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ್ ಸ್ವೀಕರಿಸುತ್ತಿರುವುದು ಸಂತಸದ ವಿಚಾರ ಎಂದಿದ್ದಾರೆ.

ಈ ವೇಳೆ ಮಾತನಾಡಿದ ರಮ್ಯಾ, ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡುತ್ತೀರಾ ಎಂಬ ಪ್ರಶ್ನೆಗೆ ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನೀಗ ಬಂದಿರೋದು ಡಿ.ಕೆ.ಶಿವಕುಮಾರ್‌ ಅವರ ಫ್ಯಾಮಿಲಿಗೋಸ್ಕರ. ಇಷ್ಟು ವರ್ಷ ಕಷ್ಟಪಟ್ಟಿರುವುದರ ಫಲ ಅವರಿಗೆ ಸಿಕ್ಕಿದೆ. ಅದನ್ನ ನೋಡಿ ಸೆಲಬ್ರೇಟ್‌ ಮಾಡೋಕೆ ಬಂದಿದ್ದೇನೆ. ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು. ಎಲ್ಲದಕ್ಕೂ ಸಮಯ ಬೇಕಲ್ಲ ಅಂದಿದ್ದಾರೆ.

ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕಾರ ಮಾಡುತ್ತಿರುವುದು ಖುಷಿ ಆಗುತ್ತಿದೆ. ಬಹಳ ವರ್ಷದಿಂದ ಅವರು ಪಟ್ಟ ಕಷ್ಟಕ್ಕೆ ಫಲ ಸಿಕ್ಕಿದೆ ಎಂದು ಶ್ಲಾಘಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular