HomeKarnatakaರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಖುದ್ದಾಗಿ ತೆರವುಗೊಳಿಸಿದ ಶಾಸಕ....!

ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಖುದ್ದಾಗಿ ತೆರವುಗೊಳಿಸಿದ ಶಾಸಕ….!

ಪ್ರಸ್ತುತ ಮಳೆಗಾಲ ಆರಂಭವಾಗಿದ್ದು, ಕೆಲವೊಂದು ಸಂದರ್ಭದಲ್ಲಿ ರಸ್ತೆಗೆ ಮರಗಳು ಬಿದ್ದು ವಾಹನ ಸಂಚಾರಕ್ಕೆ ಅಡೆತಡೆಯಾಗುತ್ತಿದೆ. ಹೀಗೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಖುದ್ದು ಶಾಸಕರೇ ತೆರವುಗೊಳಿಸಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಉಡುಪಿ ಜಿಲ್ಲೆ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳಿ ಅವರು ತಮ್ಮ ಬೆಂಬಲಿಗರೊಂದಿಗೆ ಗುರುವಾರದಂದು ಹಾಲಾಡಿ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಕಂಡಿದ್ದಾರೆ.

ಇದರಿಂದ ವಾಹನ ಸಂಚಾರಕ್ಕೆ ಅಡೆತಡೆಯಾಗಿರುವುದನ್ನು ಮನಗಂಡ ಶಾಸಕ ಗುರುರಾಜ ಗಂಟಿಹೊಳಿ ತಮ್ಮ ಬೆಂಬಲಿಗರ ಜೊತೆ ಖುದ್ದಾಗಿ ಈ ಮರವನ್ನು ತೆರವುಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಮರವೂ ಸಹ ಬಿದ್ದಿದ್ದು ತಕ್ಷಣವೇ ಎಚ್ಚೆತ್ತುಕೊಂಡ ಶಾಸಕ ಮತ್ತವರ ಬೆಂಬಲಿಗರು ಸುರಕ್ಷಿತ ಸ್ಥಳಕ್ಕೆ ತೆರಳಿ ಅಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular