
ಮಹಾರಾಷ್ಟ್ರದ ನಾಗಪುರದವರಾದ ನಿತಿನ್ ಗಡ್ಕರಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜೊತೆ ನಿಕಟ ಸಂಬಂಧ ಹೊಂದಿದ್ದು, ಆರಂಭದಿಂದಲೂ ಸಂಘಟನೆಯ ಜೊತೆ ಗುರುತಿಸಿಕೊಂಡಿದ್ದಾರೆ. ಇದರ ಮಧ್ಯೆ ಪ್ರಸ್ತುತ ಬಿಜೆಪಿ ವರಿಷ್ಠರ ಜೊತೆ ಅವರ ಬಾಂಧವ್ಯ ಉತ್ತಮವಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಇದಕ್ಕೆ ಪುಷ್ಠಿ ನೀಡುವಂತೆ ನಿತಿನ್ ಗಡ್ಕರಿಯವರು ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ನಾನು ಜೀವನದಲ್ಲಿ ಸಾಕಷ್ಟು ಕಾರ್ಯ ಮಾಡಿದ್ದೇನೆ. ಮುಂದೆ ಜನ ನನ್ನನ್ನು ಆಯ್ಕೆ ಮಾಡದಿದ್ದರೂ ಪರವಾಗಿಲ್ಲ ಎನ್ನುವ ಮೂಲಕ ರಾಜಕೀಯ ನಿವೃತ್ತಿಯ ಸುಳಿವು ನೀಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

