ರಾಜಕೀಯ ನಿವೃತ್ತಿ ವದಂತಿ ಕುರಿತು BSY ಮಹತ್ವದ ಹೇಳಿಕೆ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನಾನು ಪ್ರತಿನಿಧಿಸುತ್ತಿರುವ ಶಿಕಾರಿಪುರ ಕ್ಷೇತ್ರದಿಂದ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುವುದಾಗಿ ಇತ್ತೀಚೆಗೆ ಘೋಷಿಸಿದ್ದರು.

ಇದರಿಂದಾಗಿ ಯಡಿಯೂರಪ್ಪನವರು ರಾಜಕೀಯ ನಿವೃತ್ತಿಯಾಗಲಿದ್ದಾರೆ ಎಂಬ ವದಂತಿ ಹರಡಿತ್ತು. ಇದಕ್ಕೆ ಶಿಕಾರಿಪುರದಲ್ಲಿ ಸ್ಪಷ್ಟನೆ ನೀಡಿರುವ ಅವರು, ನಾನು ರಾಜಕೀಯದಿಂದ ನಿವೃತ್ತಿ ಪಡೆದಿಲ್ಲ ಚುನಾವಣಾ ಸ್ಪರ್ಧಾ ರಾಜಕಾರಣದಿಂದ ಮಾತ್ರ ದೂರ ಉಳಿದಿದ್ದೇನೆ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.

ಗುರುವಾರದಂದು ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ನಡೆದ ವೀರಶೈವ ಜಂಗಮ ಜನಕಲ್ಯಾಣ ಅಭಿವೃದ್ಧಿ ಟ್ರಸ್ಟ್ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ನಾನು ಅಧಿಕಾರದಲ್ಲಿದ್ದಾಗ ಯಾವುದೇ ಜಾತಿ – ಮತ – ಪಂಥ – ಧರ್ಮಗಳೆನ್ನದೆ ಅನುದಾನ ನೀಡಿದ್ದೇನೆ. ಅಭಿವೃದ್ಧಿಯೇ ನನ್ನ ಮಂತ್ರವಾಗಿತ್ತು ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read