ರಾಜ್ಯಕ್ಕೆ ಎಂಟ್ರಿಕೊಟ್ಟ ಸಿಎಂ ಯೋಗಿ ಆದಿತ್ಯನಾಥ್; JDS ಭದ್ರಕೋಟೆಯಲ್ಲಿ ಯೋಗಿ ರಣಕಹಳೆ

ಮೈಸೂರು: ವಿಧಾನಸಭಾ ಚುನಾವಣಾ ಅಖಾಡದಲ್ಲಿ ಇಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ನಡೆಸಲಿದ್ದಾರೆ.

ಈಗಾಗಲೆ ಸಿಎಂ ಯೋಗಿ ಆದಿತ್ಯನಾಥ್ ಮೈಸೂರಿಗೆ ಆಗಮಿಸಿದ್ದಾರೆ. ಲಖನೌ ವಿಮನ ನಿಲ್ದಾಣದಿಂದ ಮೈಸೂರು ಏರ್ ಪೋರ್ಟ್ ಗೆ ಆಗಮಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಬಿಜೆಪಿ ನಾಯಕರು ಆತ್ಮೀಯವಾಗಿ ಬರ ಮಾಡಿಕೊಂಡರು. ಮೈಸೂರಿನಿಂದ ಮಂಡ್ಯಕ್ಕೆ ವಿಶೇಷ ಹೆಲಿಕಾಪ್ಟರ್ ನಲ್ಲಿ ತೆರಳಿದ್ದಾರೆ.

ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಮ್ ಪರ ಯೋಗಿ ಆದಿತ್ಯನಾಥ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇದಕ್ಕೂ ಮುನ್ನ ಮಂಡ್ಯನಗರದ ಸಂಜಯ್ ವೃತ್ತದಿಂದ ಮಹಾವೀರ ರಸ್ತೆವರೆಗೂ ಅಬ್ಬರದ ರೋಡ್ ಶೋ ನಡೆಯಲಿದೆ. ಮಂಡ್ಯ ಜಿಲ್ಲಾ ಪೊಲೀಸ್ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಬಿಗಿ ಭದ್ರತೆ ಕಲ್ಪಿಸಿದೆ. ವಿಶೇಷವಾಗಿ ಎನ್ ಎಸ್ ಜಿ ಭದ್ರತೆ ಒದಗಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read