ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡದ ಕಾರಣ ಬಹಿರಂಗ

ನವದೆಹಲಿ: ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ ನಿರಾಕರಿಸಿರುವುದಕ್ಕೆ ರಾಜಕೀಯ ಆರೋಪ, ಪ್ರತ್ಯಾರೋಪ ಕೇಳಿ ಬಂದಿದೆ.
ಇದರ ನಡುವೆ ಆಹಾರ ನಿಗಮದ ಅಧಿಕಾರಿಗಳು, ಸ್ಪಷ್ಟನೆ ನೀಡಿದ್ದು, ಹೊಸ ನೀತಿ ಅನ್ವಯ ಅಕ್ಕಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಆಹಾರ ನಿಗಮದ ನೀತಿಯಲ್ಲಿ ಬದಲಾವಣೆಯಾಗಿರುವ ಕಾರಣ ರಾಜ್ಯಗಳಿಗೆ ಹೆಚ್ಚುವರಿ ಅಕ್ಕಿ ನೀಡಲಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಹೆಚ್ಚುವರಿ ಅಕ್ಕಿ ನೀಡಲು ಕರ್ನಾಟಕ ಸರ್ಕಾರ ಮನವಿ ಮಾಡಿದ್ದು, ಪ್ರಾದೇಶಿಕ ಕಚೇರಿ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದರು. ಆದರೆ, ನಿಗಮದ ನೀತಿಯಲ್ಲಿ ಬದಲಾವಣೆಯಾಗಿರುವ ಕುರಿತು ಅವರಿಗೆ ಮಾಹಿತಿ ಇಲ್ಲದ ಕಾರಣ ಒಪ್ಪಿಗೆ ನೀಡಿದ್ದರು. ನೀತಿ ಬದಲಾವಣೆ ಆಗಿರುವುದರಿಂದ ರಾಜ್ಯಗಳಿಗೆ ನೇರವಾಗಿ ಅಕ್ಕಿ ಮಾರಾಟ ನಿಲ್ಲಿಸಲಾಗಿದೆ. ಅಕ್ಕಿ, ಗೋಧಿ ಬೆಲೆ ನಿಯಂತ್ರಣಕ್ಕೆ ಮುಕ್ತ ಮಾರುಕಟ್ಟೆಗೆ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯಗಳಿಗೆ ನೀಡುತ್ತಿದ್ದ ಹೆಚ್ಚುವರಿ ಧಾನ್ಯ ಪೂರೈಕೆ ನಿಲ್ಲಿಸಲಾಗಿದೆ ಎಂದು ಎಫ್.ಸಿ.ಐ. ಅಧ್ಯಕ್ಷ ಅಶೋಕ್ ಕೆ.ಕೆ. ಮೀನಾ ಹೇಳಿದ್ದಾರೆ.

ಗರೀಬ್ ಕಲ್ಯಾಣ್ ಯೋಜನೆಯಡಿ ಪಡಿತರಕ್ಕೂ ಅಕ್ಕಿ ಅಗತ್ಯವಾಗಿದೆ. 80 ಕೋಟಿ ಜನರಿಗೆ ಆಹಾರ ಧಾನ್ಯ ಒದಗಿಸಲಾಗುತ್ತಿದ್ದು, ಉಳಿದ 60 ಕೋಟಿ ಜನರ ಬಗ್ಗೆಯೂ ಚಿಂತಿಸಬೇಕಿದೆ. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಗೋಧಿ ಬೆಲೆ ಏರಿಕೆ ಆಗುತ್ತಿರುವುದರಿಂದ ನಿಯಂತ್ರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ನೀತಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಅಕ್ಕಿ ಪೂರೈಕೆಗೆ ನೀಡಲಾಗಿದ್ದ ಅನುಮತಿ ಪತ್ರವನ್ನು ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.

ಅಕ್ಕಿ ಬೆಲೆ ಏರಿಕೆ ತಡೆ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆಹಾರ ಸಚಿವಾಲಯ ತಿಳಿಸಿದೆ. ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸುಭೋದ್ ಕುಮಾರ್ ಸಿಂಗ್ ಅವರು, ಜೂನ್ 13 ರಂದು ಎಲ್ಲಾ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮೂಲಕ ಅಕ್ಕಿ, ಗೋಧಿ ಮಾರಾಟ ನಿಲ್ಲಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಉದ್ದೇಶಪೂರ್ವಕವಾಗಿ ನಿರ್ದಿಷ್ಟ ರಾಜ್ಯ ಗುರಿಯಾಗಿಸಿಕೊಂಡು ತೆಗೆದುಕೊಂಡ ನಿರ್ಧಾರವಲ್ಲ, ಇಡೀ ದೇಶದ ಹಿತದೃಷ್ಟಿಯಿಂದ ಕೈಗೊಂಡ ತೀರ್ಮಾನವಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read