ರಾಜ್ಯದಲ್ಲಿಂದು ಬಿಜೆಪಿ ಅಬ್ಬರದ ಪ್ರಚಾರ; ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರ ಆಗಮನ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಅಬ್ಬರದಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರುಗಳು ಆಗಮಿಸಲಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಮಂಡ್ಯ ಹಾಗೂ ವಿಜಯಪುರದ ಬಸವನ ಬಾಗೇವಾಡಿ, ಇಂಡಿಯಲ್ಲಿ ಪ್ರಚಾರ ನಡೆಸಲಿದ್ದರೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿಜಯಪುರದ ಬಬಲೇಶ್ವರದಲ್ಲಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸವದತ್ತಿಯಲ್ಲಿ, ಖ್ಯಾತ ನಟ ಸುದೀಪ್ ದಾವಣಗೆರೆ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಬೆಳಗಾವಿಯ ಕಾಗವಾಡ, ಬಾಗಲಕೋಟೆಯ ಮುಧೋಳದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿಯ ಯಮಕನಮರಡಿ, ಹುಕ್ಕೇರಿ, ಕಾಗವಾಡ, ಸವದತ್ತಿ ವಿಧಾನಸಭಾ ಕ್ಷೇತ್ರದ ಯರಗಟ್ಟಿ ಮತ್ತು ಮುನವಳ್ಳಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿ, ಮಾಜಿ ಸಚಿವ ಈಶ್ವರಪ್ಪ ಬಾಗಲಕೋಟೆಯ ಬೀಳಗಿ, ಮನೋಜ್ ತಿವಾರಿ ಹಾಸನದಲ್ಲಿ, ಕೇಂದ್ರ ಸಚಿವ ಅರ್ಜುನ್ ಮುಂಡ ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಹಾಗೂ ಸ್ಮೃತಿ ಇರಾನಿ, ನಿರ್ಮಲ ಸೀತಾರಾಮನ್ ಚಿಕ್ಕೋಡಿಯ ನವಲಿ ಮತಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read