ರಾಜ್ಯದಲ್ಲಿ ನಡೆಯಲಿಲ್ಲ ಮೋದಿ ಮ್ಯಾಜಿಕ್; ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರುವ ಹಾದಿಯಲ್ಲಿ ಕಾಂಗ್ರೆಸ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಧಿಸಿ ಮತ್ತೊಮ್ಮೆ ಅಧಿಕಾರದ ಗದ್ದುಗೇರುವ ಬಿಜೆಪಿ ಕನಸು ಭಗ್ನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸತತ ಪ್ರಚಾರದ ನಡುವೆಯೂ ಬಿಜೆಪಿ ಹೀನಾಯವಾಗಿ ಸೋತಿದೆ.

ಇದರಿಂದಾಗಿ ದಕ್ಷಿಣ ಭಾರತದಲ್ಲಿ ಕರ್ನಾಟಕದ ಮೂಲಕವೇ ಇತರ ರಾಜ್ಯಗಳಲ್ಲೂ ಅಧಿಕಾರ ಸ್ಥಾಪಿಸುವ ಬಿಜೆಪಿ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ನರೇಂದ್ರ ಮೋದಿ, ಅಮಿತ್ ಷಾ, ಯೋಗಿ ಆದಿತ್ಯನಾಥ್, ಜೆಪಿ ನಡ್ಡಾ ಅವರ ಪ್ರಚಾರ ನಿಷ್ಪಲವಾಗಿದೆ.

ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರುವ ಹಾದಿಯಲ್ಲಿ ಕಾಂಗ್ರೆಸ್ ಪಕ್ಷವಿದ್ದು, ಸತತ ಸೋಲುಗಳಿಂದ ಕಂಗೆಟ್ಟಿದ್ದ ಆ ಪಕ್ಷಕ್ಕೆ ಟಾನಿಕ್ ಸಿಕ್ಕಂತಾಗಿದೆ. ಈ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಿದ್ದು, ಬಿಜೆಪಿ ಸೋಲಿಗೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read