HomeKarnatakaರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಎಂಟ್ರಿ ಫಿಕ್ಸ್

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಎಂಟ್ರಿ ಫಿಕ್ಸ್

ಮಂಡ್ಯ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಆಗಮನ ಬಹುತೇಕ ಖಚಿತವಾಗಿದೆ.

ಜನವರಿ 31ರಂದು ಸುಮಲತಾ ಬೆಂಬಲಿಗರ ಸಭೆ ನಡೆದಿತ್ತು. ಸಭೆಯಲ್ಲಿ ಸುಮಲತಾ ರಾಜ್ಯ ರಾಜಕಾರಣಕ್ಕೆ ಬರಬೇಕು ಎಂದು ಒತ್ತಾಯಿಸಲಾಗಿತ್ತು. ಬೆಂಬಲಿಗರ ಒತ್ತಾಯಕ್ಕೆ ಮಣಿದ ಸುಮಲತಾ, ರಾಜ್ಯ ರಾಜಕಾರಣಕ್ಕೆ ಬರಲು ಒಪ್ಪಿದ್ದಾರೆ ಎನ್ನಲಾಗಿದೆ.

ಅಲ್ಲದೇ ಪತಿ ಅಂಬರೀಷ್ ಪ್ರತಿನಿಧಿಸಿದ್ದ ಮಂಡ್ಯ ಕ್ಷೇತ್ರದಿಂದ ಸುಮಲತಾ ಸ್ಪರ್ಧೆಗೆ ತೀರ್ಮಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಪಕ್ಷದ ಬಗ್ಗೆ ಮಾತ್ರ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular