ರಾಮನಗರದಲ್ಲಿ HDK ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಡಿ.ಕೆ. ಸುರೇಶ್ ಕಣಕ್ಕೆ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ರಾಮನಗರ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಈವರೆಗೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಅನಿತಾ ಕುಮಾರಸ್ವಾಮಿ ತಮ್ಮ ಪುತ್ರನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದಾರೆ.

ಇದರ ಮಧ್ಯೆ ಮಹತ್ವದ ಬೆಳವಣಿಗೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ವಲಯದಲ್ಲಿ ಗಂಭೀರ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ. ಈ ಕ್ಷೇತ್ರದಿಂದ ಡಿ.ಕೆ. ಸುರೇಶ್ ಸ್ಪರ್ಧಿಸಿದರೆ ಪ್ರಬಲ ಪೈಪೋಟಿ ನೀಡಬಹುದೆಂಬ ಲೆಕ್ಕಾಚಾರ ಪಕ್ಷದ ನಾಯಕರಲ್ಲಿದೆ.

ಡಿ.ಕೆ. ಸುರೇಶ್ ಅವರ ಸಹೋದರ ಡಿ.ಕೆ. ಶಿವಕುಮಾರ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವುದರ ಜೊತೆಗೆ ರಾಜ್ಯ ರಾಜಕಾರಣದಲ್ಲಿಯೇ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಹೀಗಾಗಿ ಡಿ.ಕೆ. ಸುರೇಶ್ ಸಂಸದರಾಗಿಯೇ ಮುಂದುವರೆಯಲಿ ಎಂಬ ಚಿಂತನೆ ಇತ್ತಾದರೂ ಇದೀಗ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಮನಗರ ಕ್ಷೇತ್ರದಿಂದ ಡಿ.ಕೆ. ಸುರೇಶ್ ಅವರನ್ನು ಕಣಕ್ಕಿಳಿಸಲು ಲೆಕ್ಕಾಚಾರ ಹಾಕಲಾಗುತ್ತಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read