ರಾಷ್ಟ್ರಪತಿಗಳ ಜಾತಿ ಪ್ರಸ್ತಾಪ; ಖರ್ಗೆ – ಕೇಜ್ರಿವಾಲ್ ಗೆ ಎದುರಾಯ್ತು ಸಂಕಷ್ಟ….!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ನೂತನ ಸಂಸತ್ ಭವನದ ಉದ್ಘಾಟನೆ ನೆರವೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಇದನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಆದರೆ ಪ್ರಧಾನಿ ಉದ್ಘಾಟನೆ ಮಾಡುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ 18 ಪ್ರಮುಖ ಪ್ರತಿಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸಿವೆ.

ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನೂತನ ಸಂಸತ್ ಭವನ ಉದ್ಘಾಟನೆ ಮಾಡಿಸಬೇಕು ಎಂಬುದು ವಿರೋಧ ಪಕ್ಷಗಳ ಆಗ್ರಹವಾಗಿದ್ದು, ಈ ಕುರಿತಂತೆ ಹೇಳಿಕೆ ನೀಡುವ ವೇಳೆ ರಾಷ್ಟ್ರಪತಿ ಅವರ ಜಾತಿಯನ್ನು ಪ್ರಸ್ತಾಪಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ.

ವಕೀಲ ವಿನಿತ್ ಜಿಂದಾಲ್ ಎಂಬವರು ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಜ್ರಿವಾಲ್ ವಿರುದ್ಧ ಭಾರತೀಯ ದಂಡ ಸಂಹಿತೆ ಅನ್ವಯ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಿಸಿದ್ದು, ಹೊಸ ಸಂಸತ್ ಭವನ ಉದ್ಘಾಟನೆ ಸಂಬಂಧ ಇವರುಗಳು ನೀಡಿರುವ ಹೇಳಿಕೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುತ್ತವೆ ಹಾಗೂ ತಮ್ಮ ರಾಜಕೀಯ ಉದ್ದೇಶ ಈಡೇರಿಸಿಕೊಳ್ಳುವ ಸಲುವಾಗಿ ಭಾರತ ಸರ್ಕಾರದ ವಿರುದ್ಧ ಅಪನಂಬಿಕೆ ಹುಟ್ಟಿಸುತ್ತವೆ ಎಂದು ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read