HomeKarnatakaರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ; ಸಿಂಗಾಪುರಕ್ಕೆ ತೆರಳಿದ ಹೆಚ್.ಡಿ. ಕುಮಾರಸ್ವಾಮಿ

ರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ; ಸಿಂಗಾಪುರಕ್ಕೆ ತೆರಳಿದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಮತದಾನ ಮುಗಿಯುತ್ತಿದ್ದಂತೆ ಕುಮಾರಸ್ವಾಮಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಚುನಾವಣಾ ಫಲಿತಾಂಶಕ್ಕೆ ಇನ್ನು ಎರಡು ದಿನ ಬಾಕಿಯಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ವಿಶ್ರಾಂತಿಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ.

ನಿನ್ನೆ ತಡರಾತ್ರಿ ಆಪ್ತರ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ. ಮೇ 13ರಂದು ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular