HomeCrimeರೈಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗ

ರೈಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಹಿರಂಗ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೇಲೆ ಟಿಟಿಇ ಮೂತ್ರ ವಿಸರ್ಜನೆ ಮಾಡಿದ್ದ ಪ್ರಕರಣ ಭಾನುವಾರದಂದು ಅಖಲ್ ತಕ್ತ್ ಎಕ್ಸ್ ಪ್ರೆಸ್ ನಲ್ಲಿ ನಡೆದಿದ್ದು, ಬಿಹಾರ ಮೂಲದ ಆರೋಪಿ ಮುನ್ನಾ ಕುಮಾರ್ ನನ್ನು ಬಂಧಿಸಲಾಗಿದೆ. ಈತನ ವಿಚಾರಣೆ ವೇಳೆ ಶಾಕಿಂಗ್ ಸಂಗತಿ ಬಹಿರಂಗವಾಗಿದೆ.

ಮುನ್ನಾ ಕುಮಾರ್ ರೈಲ್ವೆ ಇಲಾಖೆಯಲ್ಲಿ ಟಿಟಿಇ ಆಗಿ ಕಾರ್ಯ ನಿರ್ವಹಿಸುತ್ತಿದ್ದರೂ ಸಹ ಘಟನೆ ನಡೆದ ದಿನದಂದು ಆತ ಕರ್ತವ್ಯದಲ್ಲಿ ಇರಲಿಲ್ಲ ಎಂಬುದು ಗೊತ್ತಾಗಿದೆ. ಸಂತ್ರಸ್ತ ಮಹಿಳೆ ಮತ್ತು ಆಕೆಯ ಪತಿ ಪ್ರಯಾಣಿಸುತ್ತಿದ್ದ ಎ1 ಕೋಚ್ ನಲ್ಲಿಯೇ ಮುನ್ನಾ ಕುಮಾರ್ ಸಹ ಪ್ರಯಾಣಿಕನಾಗಿದ್ದು, ಕರ್ತವ್ಯಕ್ಕೆ ಹಾಜರಾಗಲು ಸಹರಾನ್ಪುರ್ ಗೆ ತೆರಳುತ್ತಿದ್ದ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ಮಹಿಳೆಯ ಪತಿ ನೀಡಿದ ದೂರಿನ ಮೇರೆಗೆ ಮುನ್ನಾ ಕುಮಾರ್ ನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಅಲ್ಲದೆ ರೈಲ್ವೆ ಇಲಾಖೆ ಆತ ತೋರಿದ ದುರ್ವರ್ತನೆಗಾಗಿ ಕೆಲಸದಿಂದ ವಜಾ ಮಾಡಿದೆ. ಮುನ್ನಾ ಕುಮಾರ್ ವಿರುದ್ಧದ ಆರೋಪ ಸಾಬೀತಾದರೆ ವರ್ಷಗಟ್ಟಲೆ ಜೈಲು ಕಂಬಿ ಎಣಿಸುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular