ರೈಲಿನ ಎಸಿ ಬೋಗಿಯ ಶೌಚಾಲಯದಲ್ಲಿ ಶವ ಪತ್ತೆ

ಶಿವಮೊಗ್ಗದಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ್ದ ವ್ಯಕ್ತಿಯೊಬ್ಬರು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಹೃದಯಘಾತಕ್ಕೆ ಒಳಗಾಗಿ ಅಲ್ಲಿಯೇ ಮೃತಪಟ್ಟಿರುವ ಘಟನೆ ಶನಿವಾರದಂದು ನಡೆದಿದೆ.

ಬ್ಯಾಂಕ್ ಒಂದರಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ 35 ವರ್ಷದ ಅಶೋಕ ಚೌಧರಿ ಮೃತಪಟ್ಟವರಾಗಿದ್ದು, ಇವರು ಶನಿವಾರದಂದು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿದ್ದರು.

ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಮಾಡುತ್ತಿದ್ದ ಇವರು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಬೆಂಗಳೂರು ನಿಲ್ದಾಣದಲ್ಲಿ ಯಾರೂ ಪರಿಶೀಲನೆ ಮಾಡಿಲ್ಲ ಎನ್ನಲಾಗಿದ್ದು, ಶಿವಮೊಗ್ಗದಲ್ಲಿ ಶೌಚಾಲಯ ಸ್ವಚ್ಛಗೊಳಿಸುವಾಗ ಶವ ಪತ್ತೆಯಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read