HomeCrimeಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ....!

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್ಐ….!

ಲಂಚ ಪಡೆಯುವಾಗಲೇ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ.

ಫಿರೋಜ್ ಎಂಬವರಿಗೆ ಬಾಡಿಗೆ ವಸೂಲಿ ಮಾಡಿಕೊಡಲು 40,000 ರೂಪಾಯಿ ಲಂಚ ಪಡೆಯುವಾಗ ರಾಣೆಬೆನ್ನೂರು ನಗರ ಪೊಲೀಸ್‌ ಠಾಣೆ ಸಬ್ ಇನ್ಸ್ಪೆಕ್ಟರ್ ಸುನಿಲ್ ತೇಲಿ ಅವರನ್ನು ದಾವಣಗೆರೆ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುನೀಲ್‌ ತೇಲಿ 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, 40,000 ರೂ. ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಸುನಿಲ್ ತೇಲಿಯವರ ವಾಹನ ಚಾಲಕ ಸಚಿನ್ ಅವರನ್ನೂ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular