ಮೈಸೂರು: ರಸ್ತೆಯಲ್ಲಿ ವ್ಹೀಲಿಂಗ್, ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಲ್ಲದೆ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಹುಣಸೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹುಣಸೂರಿನ ಶಬ್ಬೀರ್ ನಗರದ ಕುರ್ಸಾನ್ ಬಂಧಿತ ಯುವಕ. ಈತ ಲಾಂಗ್ ಬೀಸುತ್ತಾ ರೀಲ್ಸ್ ಮಾಡಿದ್ದಾನೆ. ವ್ಹೀಲಿಂಗ್ ಮಾಡುತ್ತಾ ಅತಿವೇಗವಾಗಿ ಬೈಕ್ ಚಾಲನೆ ಮಾಡಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ ಕುರ್ಸಾನ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿ ಠಾಣಾ ಜಾಮೀನಿನ ಮೇಲೆ ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ.