ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆ; ಕ್ಷಮೆಯಾಚಿಸಿದ IRTC

ನವದೆಹಲಿ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ದೇಶದ ವಿವಿಧೆಡೆ ಸಂಚರಿಸುತ್ತಿದೆ. ಆದರೆ ಈ ರೈಲು ಸೇವೆ ಆರಂಭವಾದ ತಿಂಗಳಲ್ಲೇ ಊಟದ ವಿಚಾರದಲ್ಲಿ ದೂರು ಕೇಳಿಬಂದಿದೆ.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಲಾಗಿದ್ದ ಚಪಾತಿ ಊಟದಲ್ಲಿ ಜಿರಳೆ ಪತ್ತೆಯಾಗಿದೆ. ಈ ಬಗ್ಗೆ ಪ್ರಯಾಣಿಕ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭೋಪಾಲ್ ನಿಂದ ಗ್ವಾಲಿಯರ್ ಗೆ ತೆರಳುತ್ತಿದ್ದ ಪ್ರಯಾಣಿಕನಿಗೆ ರೈಲಿನಲ್ಲಿ ನೀಡಲಾಗಿದ್ದ ಪರೋಟಾದಲ್ಲಿ ಜಿರಳೆ ಪತ್ತೆಯಾಗಿದೆ. ಪುಂಡೂಕ್ ಎಂಬ ಟ್ವಿಟರ್ ಖಾತೆಯಲ್ಲಿ ಈ ಫೋಟೋ ಹಂಚಿಕೊಳ್ಳಲಾಗಿದ್ದು, ಪ್ರಯಾಣಿಕ ಐಆರ್ ಟಿಸಿಗೆ ಟ್ಯಾಗ್ ಮಾಡಿದ್ದಾರೆ.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಜಿರಳೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕನಿಗಾದ ಕೆಟ್ಟ ಅನುಭವಕ್ಕೆ ಐಆರ್ ಟಿಸಿ ಕ್ಷಮೆಯಾಚಿಸಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಭಾರಿ ದಂಡ ವಿಧಿಸುವುದರ ಜೊತೆ ಆಹಾರ ತಯಾರಿಸುವಾಗ ಎಲ್ಲಾ ಮುನ್ನಚ್ಚರಿಕೆ ತೆಗೆದುಕೊಳ್ಳುವಂತೆ ಎಚ್ಚರಿಕೆ ನೀಡಲಾಗುವುದು ಎಂದು ತಿಳಿಸಿದೆ.

ಇನ್ನು ಪ್ರಯಾಣಿಕನಿಗಾದ ಕೆಟ್ಟ ಅನುಭವಕ್ಕೆ ಪ್ರತಿಕ್ರಿಯಿಸಿರುವ ಭೋಪಾಲ್ ವಿಭಾಗೀಯ ರೈಲ್ವೆ ಮ್ಯಾನೇಜರ್, ಪ್ರಯಾಣಿಕನಿಗೆ ಪರ್ಯಾಯ ಆಹಾರ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read