HomeKarnatakaವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ಎಸೆದ ಕಿಡಿಗೇಡಿಗಳು

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ಎಸೆದ ಕಿಡಿಗೇಡಿಗಳು

ರಾಮನಗರ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಘಟನೆಗಳು ಪದೇ ಪದೇ ಮರುಕಳಿಸುತ್ತಲೇ ಇದೆ. ಇದೀಗ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ರಾಮನಗರದ ಹೊರವಲಯದಲ್ಲಿ ನಡೆದಿದೆ.

ಮೈಸೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರೈಲಿನ ಮೇಲೆ ಕಲ್ಲುತೂರಾಟ ನಡೆಸಲಾಗಿದ್ದು, ರೈಲಿನ ಗಾಜುಗಳು ಪುಡಿ ಪುಡಿಯಾಗಿವೆ. ಘಟನೆಯಿಂದಾಗಿ ಪ್ರಯಾಣಿಕರು ಆತಂಕಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲಿನ ಮೇಲೆ ಕಲ್ಲು ಎಸೆದಿರುವ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭವಾದ ನಾಲ್ಕೇದಿನಕ್ಕೆ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದರು. ದಾವಣಗೆರೆಯ ಹೊರವಲಯದಲ್ಲಿ ಈ ಘಟನೆ ನಡೆದಿತ್ತು. ಇದೀಗ ಮತ್ತೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular