HomeKarnatakaವರುಣಾದಲ್ಲಿ ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ನಿಶ್ಚಿತ; ಸೋಮಣ್ಣ ಗೆದ್ದು ವಿಧಾನಸೌಧಕ್ಕೆ ಹೋಗುವುದು ಖಚಿತ ಎಂದ...

ವರುಣಾದಲ್ಲಿ ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ನಿಶ್ಚಿತ; ಸೋಮಣ್ಣ ಗೆದ್ದು ವಿಧಾನಸೌಧಕ್ಕೆ ಹೋಗುವುದು ಖಚಿತ ಎಂದ ಯಡಿಯೂರಪ್ಪ

ಮೈಸೂರು: ವರುಣಾದಲ್ಲಿ ಸಿದ್ದರಾಮಯ್ಯ ಸೋತು ಮನೆಗೆ ಹೋಗುವುದು ನಿಶ್ಚಿತವಾಗಿದೆ, ವಿ. ಸೋಮಣ್ಣ ಗೆದ್ದು ವಿಧಾನಸೌಧಕ್ಕೆ ಹೋಗುವುದು ಖಚಿತ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ವಿ. ಸೋಮಣ್ಣ ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಸಿದ್ದರಾಮಯ್ಯ ವರುಣಾದಲ್ಲಿಯೇ ಇದ್ದರೂ ಏನೂ ಪ್ರಯೋಜನವಾಗಲಾರದು. ಈ ಬಾರಿ ಸಿದ್ದರಾಮಯ್ಯ ಸೋಲು ಖಚಿತ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. 130-135 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಹಲವಾರು ಸಮಾವೇಶ, ರೋಡ್ ಶೋ ನಡೆಸುತ್ತಿದ್ದಾರೆ. ಇದರಿಂದ ಬಿಜೆಪಿಗೆ ಇನ್ನಷ್ಟು ಬಲ ಬಂದಂತಾಗಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular