HomeKarnatakaವರುಣಾದಲ್ಲಿ ಸಿದ್ದು ಗೆಲುವಿಗೆ ಬಿಜೆಪಿ ಪರೋಕ್ಷ ಬೆಂಬಲ; ಹೊಸ ಬಾಂಬ್ ಸಿಡಿಸಿದ HDK

ವರುಣಾದಲ್ಲಿ ಸಿದ್ದು ಗೆಲುವಿಗೆ ಬಿಜೆಪಿ ಪರೋಕ್ಷ ಬೆಂಬಲ; ಹೊಸ ಬಾಂಬ್ ಸಿಡಿಸಿದ HDK

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಮುಖ ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ಮುಂದುವರೆದಿದೆ. ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಇಂದು ಹೆಚ್.ಡಿ.ಕೆ. ತಿರುಗೇಟು ನೀಡಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಮಾತನಾಡಿದ ಕುಮಾರಸ್ವಾಮಿ, ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಗೆಲುವಿಗೆ ಬಿಜೆಪಿ ಪರೋಕ್ಷ ಬೆಂಬಲ ನೀಡುತ್ತಿದೆ. ಹೀಗಾಗಿಯೇ ಆ ಕ್ಷೇತ್ರದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನು ಹಾಕುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಜೆಡಿಎಸ್ – ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿಲ್ಲ. ಆದರೆ ಕಾಂಗ್ರೆಸ್ – ಬಿಜೆಪಿ ನಡುವೆ ಒಳ ಒಪ್ಪಂದ ಆಗಿದೆ ಎಂದು ಹೇಳಿದ ಅವರು, ಜೆಡಿಎಸ್ ಪಕ್ಷ 120ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವಿಗಾಗಿ ಪ್ರಯತ್ನ ನಡೆಸಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular