ವರುಣಾದಿಂದಲೇ ಕಣಕ್ಕಿಳಿಯಲಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ ? ರಾಜಕೀಯ ವಲಯದಲ್ಲಿ ಹೀಗೊಂದು ಚರ್ಚೆ

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಯಾವ ಕ್ಷೇತ್ರದಿಂದ ಕಣಕ್ಕಿಳಿಯಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಸ್ವತಃ ಸಿದ್ದರಾಮಯ್ಯನವರೇ ತಾವು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದರೂ ಸಹ ಚರ್ಚೆಗಳು ಮಾತ್ರ ನಿಂತಿಲ್ಲ.

ಇದಕ್ಕೆ ಕಾರಣವೇನೆಂದರೆ, ಸಿದ್ದರಾಮಯ್ಯನವರು ಕೋಲಾರದಿಂದ ತಾವು ಸ್ಪರ್ಧಿಸುವುದಾಗಿ ಹೇಳುತ್ತಿದ್ದಂತೆ ಅವರ ಸೋಲಿಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ರಣತಂತ್ರ ರೂಪಿಸತೊಡಗಿದ್ದಾರೆ. ಅದರಲ್ಲೂ ಬಿಜೆಪಿ ಪಾಲಿಗೆ ಸಿದ್ದರಾಮಯ್ಯನವರು ಕಬ್ಬಿಣದ ಕಡಲೆಯಾಗಿದ್ದು, ಹೇಗಾದರೂ ಮಾಡಿ ಅವರನ್ನು ಈ ಚುನಾವಣೆಯಲ್ಲಿ ಪರಾಭವಗೊಳಿಸುವುದು ಅವರ ಗುರಿಯಾಗಿದೆ.

ಅಲ್ಲದೆ ಬಿಜೆಪಿ ಸಚಿವರು, ನಾಯಕರುಗಳು ತಮ್ಮ ಟೀಕೆಗೆ ಸಿದ್ದರಾಮಯ್ಯನವರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದು, ಇದೀಗ ಚುನಾವಣೆಯಲ್ಲೂ ಮಣಿಸುವುದು ಅವರ ಲೆಕ್ಕಾಚಾರವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರಿಗೆ ಇದು ಕೊನೆ ಚುನಾವಣೆಯಾಗುವ ಸಾಧ್ಯತೆ ಇರುವುದರಿಂದ ಅಂತಿಮವಾಗಿ ಸುರಕ್ಷಿತ ಕ್ಷೇತ್ರ ವರುಣಾದಿಂದ ಸ್ಪರ್ಧಿಸಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read