ವರುಣಾ ಕ್ಷೇತ್ರದಲ್ಲಿ ಸೋಮಣ್ಣ ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ ಗೈರು; ಅಚ್ಚರಿ ಮೂಡಿಸಿದ ಬೆಳವಣಿಗೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಚಿವ ವಿ. ಸೋಮಣ್ಣ ಸೋಮವಾರದಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಹಾಜರಿದ್ದರು.

ಸೋಮಣ್ಣನವರ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರಲಿದ್ದಾರೆ ಎನ್ನಲಾಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೈರು ಹಾಜರಾಗಿರುವುದು ಅಚ್ಚರಿ ಮೂಡಿಸಿದೆ. ವರುಣಾ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದ್ದು, ಹೀಗಾಗಿ ಸಿದ್ದರಾಮಯ್ಯನವರನ್ನು ಮಣಿಸಲು ಸೋಮಣ್ಣನವರನ್ನು ಕಣಕ್ಕಿಳಿಸಲಾಗಿದೆ.

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಯಡಿಯೂರಪ್ಪ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರೆ ಅನುಕೂಲವಿತ್ತು ಎಂಬ ಭಾವನೆ ಸೋಮಣ್ಣ ಸೇರಿದಂತೆ ಹಲವರಲ್ಲಿದೆ. ಜೊತೆಗೆ ಈ ಭಾಗದಲ್ಲಿ ಹೆಚ್ಚಿನ ಜನಬೆಂಬಲ ಹೊಂದಿರುವ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಕೂಡ ಪ್ರಚಾರಕ್ಕೆ ಬಂದರೆ ಒಳ್ಳೆಯದು ಎಂಬ ನಿರೀಕ್ಷೆ ಬಿಜೆಪಿ ವಲಯದಲ್ಲಿದೆ.

ಆದರೆ ವಿಜಯೇಂದ್ರ ಶಿಕಾರಿಪುರದಿಂದ ಕಣಕ್ಕಿಳಿದಿದ್ದು ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಯಡಿಯೂರಪ್ಪನವರ ಆಪ್ತ ಕಾಪು ಸಿದ್ದಲಿಂಗ ಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದ ವಿ. ಸೋಮಣ್ಣ ಬೆಂಬಲ ಕೋರಿದ್ದಾರೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಪ್ರಚಾರ ಕಾರ್ಯಕ್ಕೆ ಬರಬಹುದು ಎಂಬ ನಿರೀಕ್ಷೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read