HomeKarnatakaವರ್ಗಾವಣೆ ದಂಧೆ ದಾಖಲೆ ಬಿಡುಗಡೆ ಮಾಡಿದ ಮಾಜಿ ಸಿಎಂ HDK

ವರ್ಗಾವಣೆ ದಂಧೆ ದಾಖಲೆ ಬಿಡುಗಡೆ ಮಾಡಿದ ಮಾಜಿ ಸಿಎಂ HDK

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ವಿಚಾರವಾಗಿ ಪೆನ್ ಡ್ರೈವ್ ಬಾಂಬ್ ಸಿಡಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೊನೆಗೂ ವಿಧಾನಸಭೆಯಲ್ಲಿ ದಾಖಲೆ ಬಿಡುಗಡೆ ಮಾಡಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ವರ್ಗಾವಣೆ ದಂಧೆ ವಿಚಾರವಾಗಿ ಪ್ರಸ್ತಾಪ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಯಾವುದೇ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಒಂದು ಇಲಾಖೆಯಲ್ಲಿ ನಡೆದ ವರ್ಗಾವಣೆ ದಂಧೆ ರೇಟ್ ಕಾರ್ಡ್ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಕೃಷಿ ಇಲಾಖೆಯಲ್ಲಿ ನಡೆದ ಅಧಿಕಾರಿಗಳ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷಿ ಇಲಾಖೆಯ ವರ್ಗಾವಣೆಗೆ ಸಂಬಂಧಪಟ್ಟ ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದು, ವಿವಿಧ ಹುದ್ದೆಗಳ ವರ್ಗಾವಣೆಗೆ ಲಕ್ಷ ಲಕ್ಷ ಹಣ ನಿಗದಿಪಡಿಸಲಾಗಿದೆ. 30 ಜಿಲ್ಲೆಗಳ ಕೃಷಿ ಅಧಿಕಾರಿಗಳ ವರ್ಗಾವಣೆಗೆ ಇಂತಿಷ್ಟು ಎಂದು ರೇಟ್ ಫಿಕ್ಸ್ ಆಗಿರುವ ದಾಖಲೆ ಬಿಡುಗಡೆ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular