HomeKarnataka'ವರ್ಗಾವಣೆ' ಬಯಸಿರುವ ಅನುದಾನಿತ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

‘ವರ್ಗಾವಣೆ’ ಬಯಸಿರುವ ಅನುದಾನಿತ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವರ್ಗಾವಣೆ ಬಯಸಿರುವ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಂತಹ ಶಿಕ್ಷಕರ ವರ್ಗಾವಣೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವಕಾಶ ಕಲ್ಪಿಸಿಕೊಟ್ಟಿದೆ.

ವರ್ಗಾವಣೆ ಬಯಸುವ ಶಿಕ್ಷಕರು ತಾವು ಕಾರ್ಯನಿರ್ವಹಿಸುತ್ತಿರುವ ಆಡಳಿತ ಮಂಡಳಿಗಳ ಇತರೆ ಶಾಲೆಗಳಿಗೆ ಅಥವಾ ಇತರೆ ಆಡಳಿತ ಮಂಡಳಿಗಳು ನಡೆಸುತ್ತಿರುವ ಶಾಲೆಗಳಿಗೆ ಖಾಲಿ ಇರುವ ಹುದ್ದೆಗಳಿಗೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕರ ಅವಶ್ಯಕತೆ ಕುರಿತು ಶಿಕ್ಷಣಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕಿದ್ದು, ಪ್ರಸ್ತಾವನೆಗಳನ್ನು ದಾಖಲೆಗಳ ಸಹಿತ ಮೇಲಾಧಿಕಾರಿಗಳಿಗೆ ಸಲ್ಲಿಸಬೇಕಾಗಿದೆ. ವರ್ಗಾವಣೆ ಪ್ರಕ್ರಿಯೆಯನ್ನು ಜುಲೈ 31ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular