ವಿಡಿಯೋ ಮಾಡದಂತೆ ಪ್ರತಾಪ್ ಸಿಂಹ ತಾಕೀತು; ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಪ್ರಚಾರದ ವೇಳೆ ನಡೆದ ಘಟನೆ

ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸಚಿವ ವಿ. ಸೋಮಣ್ಣ ಬಿಜೆಪಿ ಅಭ್ಯರ್ಥಿಯಾಗಿದ್ದು ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಲಿತಾದ್ರಿಪುರದಲ್ಲಿ ಸಂಸದ ಪ್ರತಾಪ್ ಸಿಂಹ ಜೊತೆ ಸೋಮಣ್ಣ ಪ್ರಚಾರ ನಡೆಸುತ್ತಿದ್ದಾಗ ಗ್ರಾಮಸ್ಥರು, ನೀವು ಉಸ್ತುವಾರಿ ಸಚಿವರಾಗಿದ್ದಾಗ ತಮ್ಮ ಅನುದಾನದಲ್ಲಿ ಗ್ರಾಮಕ್ಕೆ ಯಾವುದೇ ರೀತಿಯ ಯೋಜನೆ ಜಾರಿಗೆ ತಂದಿಲ್ಲ ಎಂದು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಒಬ್ಬರು ಎಲ್ಲ ವಿದ್ಯಮಾನಗಳನ್ನು ತಮ್ಮ ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಲು ಮುಂದಾಗಿದ್ದು ಆಗ ಮಧ್ಯಪ್ರವೇಶಿಸಿದ ಸಂಸದ ಪ್ರತಾಪ್ ಸಿಂಹ ವಿಡಿಯೋ ಮಾಡದಂತೆ ತಾಕೀತು ಮಾಡಿದ್ದಾರೆ.

https://www.youtube.com/watch?v=c-E6A41FWH8

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read