ಚಿಕ್ಕಬಳ್ಳಾಪುರ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.
ಜುಲೈ 14ರಂದು ವಿಚಾರಣೆಗೆ ಹಾಜರಾಗಲು ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಶಾಸಕ ಸುಬ್ಬಾರೆಡ್ಡಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ವಿದೇಶದಲ್ಲಿ ವ್ಯವಹಾರ ಇದೆ ಎಂದು ಒಪ್ಪಿಕೊಳ್ಳುವಂತೆ ಇಡಿ ಅಧಿಕಾರಿಗಳು ನನಗೆ ಒತ್ತಾಯಿಸಿದರು. ಆದರೆ, ನಾನು ಒಪ್ಪಿಕೊಂಡಿಲ್ಲ. ನನ್ನ ಹೆಸರಿನಲ್ಲಿ ವಿದೇಶದಲ್ಲಿ ಏನಾದ್ರೂ ಆಸ್ತಿ ಅಥವಾ ಹಣ ಇದ್ದರೆ ಸರ್ಕಾರಕ್ಕೆ ಬರೆದು ಕೊಡುವುದಾಗಿ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ರಂಗಸ್ವಾಮಿ ಮತ್ತು ವೀರಸ್ವಾಮಿ ಎಂಬವರಿಂದ ನಕಲಿ ದಾಖಲೆ ಸೃಷ್ಟಿಸಲಾಗಿದೆ. ನನ್ನ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಈ ಕುರಿತಾಗಿ ಹಿಂದೆಯೇ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.