ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ವಾರ ‘SSLC’ ಫಲಿತಾಂಶ ಬಿಡುಗಡೆ ಸಾಧ್ಯತೆ

ಬೆಂಗಳೂರು : ಈಗಾಗಲೇ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯ ಮೌಲ್ಯಮಾಪನ ಪೂರ್ಣಗೊಂಡಿದ್ದು, ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ವಾರ ಎಸ್ ಎಸ್ ಎಲ್ ಸಿ ಫಲಿತಾಂಶ ( Result) ಪ್ರಕಟವಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ಹೌದು, ಕರ್ನಾಟಕ ಎಸ್ಎಸ್ಎಲ್ಸಿ 2023 ರ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅತಿ ಶೀಘ್ರದಲ್ಲಿ ಫಲಿತಾಂಶ ಹೊರಬೀಳಲಿದೆ. ಇದೇ ವಾರ ಫಲಿತಾಂಶ ಪ್ರಕಟವಾಗಬಹುದು ಎನ್ನಲಾಗಿದೆ.

ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ. ಅಧಿಕೃತ ವೆಬ್ಸೈಟ್-karresults.nic.in ಗೆ ಹೋಗಿ, ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿದರೆ ಹೊಸ ಲಾಗಿನ್ ಪುಟ ತೆರೆಯುತ್ತದೆ, ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ( Register Number) ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿದರೆ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ಈ ಬಾರಿ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ (Register) ಮಾಡಿಕೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read