
ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮುಂದುವರೆದ ಚರ್ಚೆಯಲ್ಲಿ ಬುಧವಾರದಂದು ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಅವರು ಈ ಮಾತು ಹೇಳಿದ್ದಾರೆ.
ಶಿಕ್ಷಣ ಪೂರೈಸಿದ ಬಳಿಕ ಸಕಾಲಕ್ಕೆ ಉದ್ಯೋಗ ಸಿಗದೆ ಉನ್ನತ ಶಿಕ್ಷಣಕ್ಕೆ ಸಾಲ ಪಡೆದ ವಿದ್ಯಾರ್ಥಿಗಳು ಕಷ್ಟಪಡುತ್ತಿದ್ದಾರೆ. ಹೀಗಾಗಿ ಸಾಲ ಮನ್ನಾ ಮಾಡಬೇಕು ಅಥವಾ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬೇಕು. ಇದನ್ನು ಈ ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಎಂದು ಅವರು ತಿಳಿಸಿದರು.

