HomeKarnatakaವಿದ್ಯುತ್ ದರ ಏರಿಕೆ ಹಿಂಪಡೆಯಿರಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

ವಿದ್ಯುತ್ ದರ ಏರಿಕೆ ಹಿಂಪಡೆಯಿರಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಮನಬಂದಂತೆ ವಿದ್ಯುತ್ ದರವನ್ನು ಏರಿಕೆ ಮಾಡಿದೆ. ಸರ್ಕಾರದ ಈ ಕ್ರಮ ಖಂಡನೀಯ. ದರ ಹೀಗೆ ಏರಿಕೆಯಾದ್ರೆ ಸಾಮಾನ್ಯ ಜನ ಬದುಕೋದು ಹೇಗೆ? ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಡಿದ ಯಡಿಯೂರಪ್ಪ, ವಿದ್ಯುತ್ ದರ ಏರಿಕೆ ವಿಚಾರ ಸರಿಯಲ್ಲ. ಸರ್ಕಾರ ವಿದ್ಯುತ್‌ ದರ ಏರಿಸಿರುವ ನಿರ್ಧಾರವನ್ನು ಹಿಂಪಡೆಯಬೇಕು. ಸರಿಯಾಗಿ ಆಡಳಿತ ಮಾಡಲು ಬಾರದೆ ಬೇಕಾಬಿಟ್ಟಿ ವಿದ್ಯುತ್ ದರ ಜಾಸ್ತಿ ಮಾಡಿದ್ದಾರೆ. ಸರ್ಕಾರ ಕೂಡಲೇ ವಿದ್ಯುತ್ ದರ ಏರಿಕೆ ನಿರ್ಧಾರ ವಾಪಸ್ ಪಡೆದು ಜನ ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ವಿದ್ಯುತ್ ದರ ಏರಿಕೆ ಜನಸಾಮಾನ್ಯರಿಗೆ ಹೊರೆಯಾಗಲಿದೆ. ಈಗಿರುವ ಸಂದರ್ಭದಲ್ಲಿ ದರ ಏರಿಕೆ ಸರಿಯಲ್ಲ. ಮೊದಲು ರಾಜ್ಯ ಸರ್ಕಾರ ದರ ಏರಿಕೆ ವಾಪಸ್ ಪಡೆಯಲಿ ಎಂದರು. ಇದೇ ವೇಳೆ ಯಡಿಯೂರಪ್ಪ, ಎಂಎಲ್‌ಸಿ ಸಿ.ಟಿ.ರವಿಯವರ ಮನೆಗೆ ಭೇಟಿ ನೀಡಿದ್ದು, ಸಿ.ಟಿ.ರವಿ ದಂಪತಿ ಆರತಿ ಮಾಡಿ ಮನೆಯೊಳಗೆ ಕರೆದೊಯ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular