ವಿಧಾನಸಭೆ ಚುನಾವಣಾ ಕಾವು; ರಾಜ್ಯದಲ್ಲಿ ಇಂದು ಜೆ.ಪಿ. ನಡ್ಡಾ ಅಬ್ಬರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ರಾಜ್ಯ ಪ್ರವಾಸದಲ್ಲಿದ್ದಾರೆ.

ಮೇ ತಿಂಗಳೊಳಗೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಪಕ್ಷದ “ವಿಜಯ ಸಂಕಲ್ಪ ಯಾತ್ರೆ” ಯ ಭಾಗವಾಗಿ ರೋಡ್‌ಶೋ ಮತ್ತು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಗುರುವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಗುರುವಾರ ಸಂಜೆ 5.20ರ ಸುಮಾರಿಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ನಡ್ಡಾ, ನಗರದ ಕೆಆರ್‌ ಪುರಕ್ಕೆ ತೆರಳಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಆರ್ ಪುರಂನ ಗಣಪತಿ ದೇವಸ್ಥಾನದ ಬಳಿ ಪಕ್ಷದ ಮಹಿಳಾ ಕಾರ್ಯಕರ್ತರಿಂದ ಸ್ವಾಗತ ಪಡೆದ ನಂತರ ಅವರು ಸಾರ್ವಜನಿಕ ಸಭೆ ನಡೆಯುವ ಸರ್ಕಾರಿ ಕಾಲೇಜು ಮೈದಾನಕ್ಕೆ ರೋಡ್ ಶೋ ಮೂಲಕ ತೆರಳಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read