ವಿಮಾನ ನಿಲ್ದಾಣ ಉದ್ಘಾಟನೆ ಸಂದರ್ಭದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರ ಆಗಮನ

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಭಾಗವಹಿಸಿದ್ದರು. ಬೆಳಿಗ್ಗೆ 7 ಗಂಟೆಯಿಂದಲೇ ವಿವಿಧೆಡೆಯಿಂದ ವಿಮಾನ ನಿಲ್ದಾಣ ಸಂಪರ್ಕಿಸುವ ರಸ್ತೆಗಳಲ್ಲಿ ಜನಸಂದಣಿ ಕಂಡುಬಂದಿತು. ಸಾವಿರಾರು ಸಂಖ್ಯೆಯ ವಾಹನಗಳಲ್ಲಿ ಜನ ಆಗಮಿಸಿದ್ದರು.

ಪ್ರಧಾನಿ ಮೋದಿ ಆಗಮಿಸಿ ವಿಮಾನ ನಿಲ್ದಾಣ ಉದ್ಘಾಟಿಸಿದರೂ ಜನ ಇನ್ನೂ ಬರುತ್ತಲೇ ಇದ್ದರು. ಭಾರೀ ಸಂಖ್ಯೆಯ ಜನರಿಗೆ ವಿಮಾನ ನಿಲ್ದಾಣ ಉದ್ಘಾಟನಾ ಸ್ಥಳ ತಲುಪಲು ಸಾಧ್ಯವಾಗಲಿಲ್ಲ.

ವಿದ್ಯಾನಗರ ಮುಖ್ಯರಸ್ತೆ, ಬೈಪಾಸ್ ರಸ್ತೆಯಲ್ಲಿ ಕಿಲೋ ಮೀಟರ್ ದೂರದವರೆಗೂ ಬಸ್‌ಗಳು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಕೆಲವರು ನಡೆದುಕೊಂಡೇ ಕಾರ್ಯಕ್ರಮದ ಸ್ಥಳಕ್ಕೆ ಹೋಗುವ ಪ್ರಯತ್ನ ಮಾಡಿದರಾದರೂ ಈ ವೇಳೆಗಾಗಲೇ ಉದ್ಘಾಟನಾ ಕಾರ್ಯಕ್ರಮ ಮುಗಿದಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read