
ಅಮೆರಿಕಾ ಮೂಲದ ಸಂಶೋಧನಾ ಸಂಸ್ಥೆ ಹಿಂಡನ್ ಬರ್ಗ್ ವರದಿ ಬಿಡುಗಡೆ ಮಾಡಿದ ಬಳಿಕ ಗೌತಮ್ ಅದಾನಿಯವರ ಸಂಪತ್ತಿನಲ್ಲಿ ಬರೋಬ್ಬರಿ 6.64 ಲಕ್ಷ ಕೋಟಿ ರೂಪಾಯಗಳು ಕಡಿಮೆಯಾಗಿದ್ದು, ಹೀಗಾಗಿ ವಿಶ್ವ ಸಿರಿವಂತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದ ಅವರು ಈಗ 30ನೇ ಸ್ಥಾನಕ್ಕೆ ಕುಸಿದಿದ್ದಾರೆ.
ಹಿಂಡನ್ ಬರ್ಗ್ ವರದಿ ಬಿಡುಗಡೆಗೂ ಮುನ್ನ ಗೌತಮ್ ಅದಾನಿ 9.96 ಲಕ್ಷ ಕೋಟಿ ರೂಪಾಯಿಗಳ ಆಸ್ತಿಯನ್ನು ಹೊಂದಿದ್ದು, ಈಗ 3.32 ಲಕ್ಷ ಕೋಟಿ ರೂಪಾಯಿಗಳಿಗೆ ಇಳಿಕೆಯಾಗಿದೆ. ಇನ್ನು 6.78 ಲಕ್ಷ ಕೋಟಿ ರೂಪಾಯಿಗಳ ಆಸ್ತಿ ಹೊಂದಿರುವ ಮುಕೇಶ್ ಅಂಬಾನಿ ವಿಶ್ವ ಸಿರಿವಂತರ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದ್ದಾರೆ.

