
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ದೇವಾಲಯಗಳಿಗೆ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ.
ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಜೊತೆ ವೀಕೆಂಡ್ ಹಿನ್ನೆಲೆಯಲ್ಲಿ ಬಾದಾಮಿಯ ಪ್ರಸಿದ್ಧ ಬನಶಂಕರಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಸರ್ಕಾರಿ ಬಸ್ ಗಳಲ್ಲಿ ವಿವಿಧ ಜಿಲ್ಲೆಗಳಿಂದ ಮಹಿಳಾ ಭಕ್ತರು ಆಗಮಿಸಿ, ಬನಶಂಕರಿ ದೇವಿ ದರ್ಶನ ಪಡೆಯುತ್ತಿದ್ದಾರೆ.
ಇನ್ನೊಂದೆಡೆ ವೀಕೆಂಡ್ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಲ್ಲಿಯೂ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ನಂದಿಬೆಟ್ಟ, ಚಿಕ್ಕಮಗಳೂರು, ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದಲು ಪ್ರವಾಸಿಗರು ಅಗಮಿಸುತ್ತಿದ್ದು, ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ಬಳಿ ಸಾಲು ಸಾಲು ವಾಹನಗಳು ನಿಂತಿವೆ. ಇನ್ನೊಂದೆಡೆ ನಂದಿ ಗಿರಿಧಾಮದಲ್ಲಿ ಪ್ರವಾಸಿಗರ ವಾಹನದಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ.

 
			 
		 
		 
		 
		 Loading ...
 Loading ... 
		 
		 
		