ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಈ ಸಭೆ ಸಂದರ್ಭದಲ್ಲಿ ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗಿದೆ.
15,000 ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕ ಪ್ರಕ್ರಿಯೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಲಾಯಿತು. pic.twitter.com/CafjbhbBve
— B.C Nagesh (@BCNagesh_bjp) February 7, 2023