ಶಿವಮೊಗ್ಗಕ್ಕೆ ಬಂದರೂ ನಗರದೊಳಗೆ ಬರುವುದಿಲ್ಲ ಪ್ರಧಾನಿ ನರೇಂದ್ರ ಮೋದಿ….!

ಶಿವಮೊಗ್ಗ ಜಿಲ್ಲೆಯ ಬಹು ದಿನಗಳ ಕನಸಾದ ವಿಮಾನ ನಿಲ್ದಾಣ ಇಂದು ಲೋಕಾರ್ಪಣೆಗೊಳ್ಳಲಿದೆ. ವಿಶೇಷ ವಿಮಾನದಲ್ಲಿ ನೂತನ ಏರ್ಪೋರ್ಟ್ ಗೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಲಿದ್ದು, ಈ ಹಿನ್ನೆಲೆಯಲ್ಲಿ ಇಡೀ ಶಿವಮೊಗ್ಗ ನಗರ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬವೂ ಸಹ ಇದ್ದು, ಹೀಗಾಗಿ ಅವರಿಗೆ ಶುಭ ಕೋರಿ ಶಿವಮೊಗ್ಗ ನಗರದ ತುಂಬೆಲ್ಲಾ ಫ್ಲೆಕ್ಸ್, ಬ್ಯಾನರ್, ಕಟೌಟ್ ಗಳು ರಾರಾಜಿಸುತ್ತಿವೆ. ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದ್ದು, ಬೆಳಿಗ್ಗೆಯಿಂದಲೇ ಯಡಿಯೂರಪ್ಪನವರ ನಿವಾಸಕ್ಕೆ ತೆರಳಿ ಗಣ್ಯರು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.

ಇಂದು ಬೆಳಗ್ಗೆ 11:30 ರ ಸುಮಾರಿಗೆ ನೂತನ ವಿಮಾನ ನಿಲ್ದಾಣದಲ್ಲಿ ನರೇಂದ್ರ ಮೋದಿಯವರು ಬಂದಿಳಿಯಲಿದ್ದು, ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ನಿಲ್ದಾಣದ ಟರ್ಮಿನಲ್ ಆವರಣದಲ್ಲಿ ನಿರ್ಮಿಸಿರುವ ವೇದಿಕೆಗೆ ಬಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಅಲ್ಲಿಂದಲೇ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ತೆರಳಲಿದ್ದಾರೆ. ಹೀಗಾಗಿ ಶಿವಮೊಗ್ಗಕ್ಕೆ ಭೇಟಿ ನೀಡಿದರೂ ಅವರು ನಗರದೊಳಗೆ ಬರುವುದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read