ಶಿವಮೊಗ್ಗದಲ್ಲಿಂದು ಅಮಿತ್ ಷಾ ರೋಡ್ ಶೋ; ಖಾಕಿ ಸರ್ಪಗಾವಲು

ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ರಾಜ್ಯದಾದ್ಯಂತ ವ್ಯಾಪಕ ಪ್ರಚಾರ ಕಾರ್ಯ ನಡೆಸಿರುವ ಗೃಹ ಸಚಿವ ಅಮಿತ್ ಷಾ, ಇಂದು ಶಿವಮೊಗ್ಗದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಶಿವಪ್ಪನಾಯಕ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯರಸ್ತೆ, ಜೈಲ್ ಸರ್ಕಲ್, ಜೈಲ್ ರಸ್ತೆ ಮೂಲಕ ಸಾಗಿ ಲಕ್ಷ್ಮಿ ಟಾಕೀಸ್ ಸರ್ಕಲ್ ನಲ್ಲಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಮಾರ್ಗವನ್ನು ಶೂನ್ಯ ಸಂಚಾರ ಮಾರ್ಗವಾಗಿ ಘೋಷಿಸಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 7.30 ರ ವರೆಗೆ ಈ ರಸ್ತೆಗಳಲ್ಲಿ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶ ನಿರಾಕರಿಸಲಾಗಿದ್ದು, ಬದಲಿ ಮಾರ್ಗಗಳನ್ನು ಬಳಸಿಕೊಳ್ಳುವಂತೆ ಸಾರ್ವಜನಿಕರಿಗೆ ಕೋರಲಾಗಿದೆ. ರೋಡ್ ಶೋನಲ್ಲಿ ಭಾಗವಹಿಸುವವರು ತಮ್ಮ ವಾಹನಗಳನ್ನು ಫ್ರೀಡಂ ಪಾರ್ಕ್ ಮೈದಾನ, ಎನ್ಇಎಸ್ ಮೈದಾನ ಮತ್ತು ಸೈನ್ಸ್ ಕಾಲೇಜು ಮೈದಾನದಲ್ಲಿ ಪಾರ್ಕಿಂಗ್ ಮಾಡಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read