HomeEntertainmentಶಿವಮೊಗ್ಗದಲ್ಲಿ 'ಬೈರತಿ ರಣಗಲ್' ಸಂಭ್ರಮಾಚರಣೆ: ಶಿವಣ್ಣ ನೋಡಲು ಮುಗಿಬಿದ್ದ ಅಭಿಮಾನಿಗಳು

ಶಿವಮೊಗ್ಗದಲ್ಲಿ ‘ಬೈರತಿ ರಣಗಲ್’ ಸಂಭ್ರಮಾಚರಣೆ: ಶಿವಣ್ಣ ನೋಡಲು ಮುಗಿಬಿದ್ದ ಅಭಿಮಾನಿಗಳು

ಶಿವಮೊಗ್ಗ: ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹ್ಯಾಟ್ರಿಕ್ ಹೀರೋ ಡಾ.ಶಿವರಾಜಕುಮಾರ್ ಅಭಿನಯದ ‘ಬೈರತಿ ರಣಗಲ್’ ಚಿತ್ರದ ಸಂಭ್ರಮಾಚರಣೆ ಶಿವಮೊಗ್ಗದಲ್ಲಿ ಅದ್ದೂರಿಯಾಗಿ ನಡೆದಿದೆ.

ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ನಟ ಶಿವರಾಜ್ ಕುಮಾರ್ ಆಗಮಿಸಿದ ಸಂದರ್ಭದಲ್ಲಿ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಶಿವಮೊಗ್ಗಕ್ಕೆ ಶಿವಣ್ಣ ಆಗಮನದ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಫ್ಲೆಕ್ಸ್ ಗಳನ್ನು ಹಾಕಿ ಚಿತ್ರಮಂದಿರ ಸಿಂಗರಿಸಿ ‘ಬೈರತಿ ರಣಗಲ್’ ಯಶಸ್ಸಿನ ಸಂಭ್ರಮಾಚರಣೆ ನಡೆಸಿದ್ದಾರೆ.

ಮಧ್ಯಾಹ್ನದ ವೇಳೆಗೆ ಶಿವಣ್ಣ ಆಗಮಿಸುತ್ತಿದ್ದಂತೆ ಅಭಿಮಾನಿಗಳ ಘೋಷಣೆ ಮುಗಿಲು ಮುಟ್ಟಿದ್ದು, ‘ಬೈರತಿ ರಣಗಲ್’ ಯಶಸ್ವಿಯಾದ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ, ಪ್ರೇಕ್ಷಕರಿಗೆ ಶಿವಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ. ಈ ವೇಳೆ ಶಿವಣ್ಣ ಅವರನ್ನು ನೋಡಲು, ಫೋಟೋ, ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅನೇಕರು ಕಪ್ಪು ಬಣ್ಣದ ಅಂಗಿ, ಲುಂಗಿ ಧರಿಸಿ ಆಗಮಿಸಿದ್ದು, ವಿಶೇಷವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular