ಶಿವಮೊಗ್ಗ: ಹೆಚ್.ಸಿ. ಯೋಗೀಶ್, ಶ್ರೀನಿವಾಸ ಕರಿಯಣ್ಣ, ಗೋಣಿ ಮಾಲತೇಶ್ ಗೆ ʼಕೈʼ ಟಿಕೆಟ್ ಘೋಷಣೆ

ರಾಜ್ಯ ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ ಆಗಿದ್ದು, ಶಿವಮೊಗ್ಗ ನಗರ ಕ್ಷೇತ್ರದಿಂದ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್ ಅವರಿಗೆ ಟಿಕೆಟ್ ನೀಡಲಾಗಿದೆ.

ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದಿಂದ ಡಾ. ಶ್ರೀನಿವಾಸ ಕರಿಯಣ್ಣ ಹಾಗೂ ಶಿಕಾರಿಪುರ ಕ್ಷೇತ್ರದಿಂದ ಜಿ.ಬಿ. ಮಾಲತೇಶ್ (ಗೋಣಿ ಮಾಲತೇಶ್) ಅವರಿಗೆ ಟಿಕೆಟ್ ಘೋಷಣೆ ಆಗಿದೆ.

ಈ ಹಿಂದೆ ಭದ್ರಾವತಿಯಿಂದ ಬಿ.ಕೆ. ಸಂಗಮೇಶ್ವರ್, ಸೊರಬದಿಂದ ಮಧುಬಂಗಾರಪ್ಪ, ಸಾಗರದಿಂದ ಬೇಳೂರು ಗೋಪಾಲಕೃಷ್ಣ, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್ ಅವರಿಗೆ ಟಿಕೆಟ್ ಘೋಷಣೆ ಆಗಿತ್ತು.

ಶಿವಮೊಗ್ಗ ನಗರ ಕ್ಷೇತ್ರದಿಂದ 11 ಮಂದಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದರು. ಅವರಲ್ಲಿ ಪ್ರಮುಖವಾಗಿ ಕೆ.ಬಿ. ಪ್ರಸನ್ನಕುಮಾರ್, ಹೆಚ್.ಎಸ್. ಸುಂದರೇಶ್, ಎಸ್.ಕೆ. ಮರಿಯಪ್ಪ, ವೈ.ಹೆಚ್. ನಾಗರಾಜ್ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದರು.

ಈ ನಡುವೆ ಆಯನೂರು ಮಂಜುನಾಥ್ ಕಾಂಗ್ರೆಸ್‌ನಿAದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿ ತಮ್ಮಲ್ಲೇ ಒಬ್ಬರಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದರು.

ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಹಿನ್ನೆಲೆಯಲ್ಲಿ ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್ ಪಡೆಯುವಲ್ಲಿ ಹೆಚ್.ಸಿ. ಯೊಗೀಶ್ ಯಶಸ್ವಿಯಾಗಿದ್ದಾರೆ.

ಇದರೊಂದಿಗೆ ಶಿವಮೊಗ್ಗ ನಗರ, ಗ್ರಾಮಾಂತರ, ಶಿಕಾರಿಪುರ ವಿಧಾನಸಭಾಕ್ಷೇತ್ರಗಳು ಜಿದ್ದಾಜಿದ್ದಿನ ಕಣಗಳಾಗುವ ಎಲ್ಲಾ ಸಾಧ್ಯತೆಗಳಿವೆ. ಶಿವಮೊಗ್ಗಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ ಶೀಘ್ರವೇ ಆಗಲಿದ್ದು, ಚುನಾವಣೆಯ ಕಾವು ಮತ್ತಷ್ಟು ಏರಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read