HomeKarnatakaಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದ್ರು ಗೊತ್ತಿಲ್ಲ; ಸಿದ್ದರಾಮಯ್ಯ ಪರ ಶಿವಣ್ಣನ ಪ್ರಚಾರಕ್ಕೆ ಸಚಿವ ಸೋಮಣ್ಣ...

ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದ್ರು ಗೊತ್ತಿಲ್ಲ; ಸಿದ್ದರಾಮಯ್ಯ ಪರ ಶಿವಣ್ಣನ ಪ್ರಚಾರಕ್ಕೆ ಸಚಿವ ಸೋಮಣ್ಣ ಅಸಮಾಧಾನ

ವರುಣಾ: ಮೈಸೂರಿನ ವರುಣಾ ಅಖಾಡದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್ ಅಬ್ಬರದ ಪ್ರಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಪರ ಶಿವಣ್ಣನ ಪ್ರಚಾರಕ್ಕೆ ಬಿಜೆಪಿ ಅಭ್ಯರ್ಥಿ, ಸಚಿವ ವಿ. ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ. ಸೋಮಣ್ಣ, ಸಿದ್ದರಾಮಯ್ಯ ಹತಾಶರಾಗಿ ಸ್ಟಾರ್ ಗಳನ್ನು ಕರೆಸಿ ಪ್ರಚಾರ ನಡೆಸಿದ್ದಾರೆ. ಸಿದ್ದರಾಮಯ್ಯ ಪರ ಶಿವರಾಜ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ. ಅವರು ಯಾಕೆ ಹೀಗೆ ಮಾಡಿದ್ರು ಗೊತ್ತಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಕುಮಾರ್ ಕುಟುಂಬಕ್ಕೂ ನನಗೂ 40 ವರ್ಷಗಳ ಅವಿನಾಭಾವ ಸಂಬಂಧವಿದೆ. ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಮ್ಮ ಕ್ಷೇತ್ರದಲ್ಲಿ ಬೃಹತ್ ಆಸ್ಪತ್ರೆ ಕಟ್ಟಿದ್ದೇನೆ. ಆದರೂ ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದರು ನನಗೆ ಗೊತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ನನಗೆ ವಿಜಯ್, ರಮ್ಯಾ ಬಗ್ಗೆ ಗೊತ್ತಿಲ್ಲ, ಆದರೆ ಶಿವರಾಜ್ ಕುಮಾರ್ ಯಾಕೆ ಹೀಗೆ ಮಾಡಿದರೆಂಬುದೇ ಗೊತ್ತಾಗುತ್ತಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular