HomeKarnatakaಶಿವರಾತ್ರಿಯಂದು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವು

ಶಿವರಾತ್ರಿಯಂದು ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವು

ಶಿವರಾತ್ರಿಯಂದು ತನ್ನ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಕೊಡಗು ಮೂಲದ 22 ವರ್ಷದ ಜಗನ್ ಮೃತಪಟ್ಟವನಾಗಿದ್ದು, ಈತ ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಶನಿವಾರದಂದು ರಜೆ ಇದ್ದ ಕಾರಣ ತನ್ನ ಐದು ಜನ ಸ್ನೇಹಿತರೊಂದಿಗೆ ಭದ್ರಾವತಿ ತಾಲೂಕಿನ ಗೋಂದಿ ಆಣೆಕಟ್ಟಿನಲ್ಲಿ ಈಜಲು ತೆರಳಿದ್ದು ಮುಳುಗಿ ಮೃತಪಟ್ಟಿದ್ದಾನೆ. ಆತನ ಶವವನ್ನು ಹೊರ ತೆಗೆಯಲಾಗಿದ್ದು, ಭದ್ರಾವತಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular