HomeKarnatakaಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದರೂ ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದ ಸಹೋದರ....!

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದರೂ ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದ ಸಹೋದರ….!

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆಗೆ ತಮಗೆ ಅವಕಾಶ ನೀಡದಿರುವುದರಿಂದ ಪಕ್ಷದ ನಾಯಕರ ವಿರುದ್ಧ ಸಿಡಿದೆದ್ದಿರುವ ಶೆಟ್ಟರ್, ಈಗಾಗಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಇಂದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿದ್ದು, ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗುವುದು ಖಚಿತವಾಗಿದೆ.

ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಜಗದೀಶ್ ಶೆಟ್ಟರ್ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ನಾನು ಬಿಜೆಪಿಯಲ್ಲಿಯೇ ಮುಂದುವರಿಯುತ್ತೇನೆ ಎಂದು ತಿಳಿಸಿದ್ದಾರೆ. ರಾಜಕೀಯ ಬೇರೆ ವೈಯಕ್ತಿಕ ಸಂಬಂಧ ಬೇರೆ ಎಂದು ಹೇಳಿರುವ ಅವರು, ಜಗದೀಶ್ ಶೆಟ್ಟರ್ ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular