
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಗುರುವಾರದಂದು ಶ್ರೀ ರಾಮನವಮಿ ಉತ್ಸವ ಸಮಿತಿ ಆಯೋಜಿಸಿದ್ದ ಮೆರವಣಿಗೆ ವೇಳೆ ಶಾಸಕ ಶರಣು ಸಲಗರ ಶ್ರೀ ರಾಮನ ಉತ್ಸವ ಮೂರ್ತಿ ತೊಡೆ ಮೇಲೆ ನಿಂತು ಮಾಲಾರ್ಪಣೆ ಮಾಡಿದ್ದಾರೆ.
ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಳಿಕ ಶಾಸಕರು ಬಹಿರಂಗವಾಗಿಯೇ ಕ್ಷಮೆ ಕೋರಿದ್ದಾರೆ.

