ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 3 ರ ನಾಳೆ 51ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, 201 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ನಾಳೆ ಸಂಜೆ 6:40ಕ್ಕೆ ಲಗ್ನ ಮುಹೂರ್ತದಲ್ಲಿ ವಿವಾಹ ನೆರವೇರಲಿದ್ದು, ಇಂದು ದಾಖಲೆಗಳನ್ನು ಪರಿಶೀಲಿಸಿದ ಬಳಿಕ ವಧುವಿಗೆ ಸೀರೆ, ರವಿಕೆ ಕಣ ಹಾಗೂ ವರನಿಗೆ ಧೋತಿ – ಶಾಲು ನೀಡಲಾಗುತ್ತದೆ.

ನಾಳೆ ಸಂಜೆ 5:00 ಗಂಟೆಗೆ ಮೆರವಣಿಗೆಯಲ್ಲಿ ವಧು-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ಬಂದ ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ವಿವಾಹ ಸಮಾರಂಭ ನಡೆಯಲಿದ್ದು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ ಹೆಗ್ಗಡೆ ಹಾಗೂ ನಟ ದರ್ಶನ್ ಮಂಗಳಸೂತ್ರ ವಿತರಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read